ಪುತ್ತೂರು: ಸಮೃದ್ಧಿ ಸಂಜೀವಿನಿ ಬಲ್ನಾಡು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಆಟಿದ ಕೂಟ ಬಲ್ನಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ತೆಂಗಿನ ಹಿಂಗಾರ ಬಿಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಬಿ.ಆರ್ ಮಾತನಾಡಿ, ಆಟಿ ವೈಶಿಷ್ಟ್ಯಗಳ ಬಗ್ಗೆ ಹಿಂದಿನ ಮತ್ತು ಈಗಿನ ಆಟಿ ಆಚರಣೆಯ ಬಗ್ಗೆ ವಿವರಿಸಿದರು. ಮಮತಾ ಅಧ್ಯಕ್ಷತೆ ವಹಿಸಿದ್ದರು. ಎನ್‌ಆರ್‌ಎಲ್‌ಎಂನ ವಲಯ ಮೇಲ್ವಿಚಾರಕಿ ನಮಿತಾ.ಕೆ. ಮಹಿಳಾ ಸಾಂತ್ವನ ಕೇಂದ್ರ ಆಪ್ತ ಸಮಾಲೋಚಕಿ ನಿಶಪ್ರಿಯ, ಅಮೂಲ್ಯ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿ ಗೀತಾ, ಬಲ್ನಾಡು ಗ್ರಾ.ಪಂ ಪಿಡಿಓ ದೇವಪ್ಪ ಪಿ.ಆರ್., ಹಾಗೂ ತಾಲೂಕು ಸಂಪನ್ಮೂಲ ವ್ಯಕ್ತಿ ಅಂಕಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಸಹಾಯ ಸಂಘಗಳ ಸದಸ್ಯರು ಆಟಿ ತಿಂಗಳ ವಿವಿಧ ಬಗೆಯ ವಿಶೇಷ ತಿನಿಸುಗಳನ್ನು ತಯಾರಿಸಿ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನೂ ಸಾಂಪ್ರದಾಯಿಕವಾಗಿ ಬೆಲ್ಲ ನೀರು ಕೊಟ್ಟು ಬರಮಾಡಿಕೊಳ್ಳಲಾಯಿತು. ತಾಂಬೂಲ ನೀಡುವುದರೊಂದಿಗೆ ಅತಿಥಿ ಅಭ್ಯಾಗತರನ್ನು ಸ್ವಾಗತಿಸಲಾಯಿತು.
ಸಮೃದ್ಧಿ ಸಂಜೀವಿನಿ ಒಕ್ಕೂಟ ಸಿಬ್ಬಂದಿಗಳಿಂದ ಜಾನಪದ ನೃತ್ಯ ಪ್ರಸ್ತುತಪಡಿಸಲಾಯಿತು. ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು,ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು, ಸಮುದಾಯ ಆರೋಗ್ಯ ಅಧಿಕಾರಿ, ಆಶಾ ಕಾರ್ಯಕರ್ತೆಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ ಉಮಾವತಿ ಪ್ರಾರ್ಥಿಸಿ, ಕೃಷಿ ಸಖಿ ವಿಮಲ ಸ್ವಾಗತಿಸಿದರು. ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ ಅಕ್ಷತಾ ವಂದಿಸಿದರು. ಮುಖ್ಯ ಪುಸ್ತಕ ಬರಹಗಾರ್ತಿ ಅಂಬಿಕಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಘನತ್ಯಾಜ್ಯ ಸಿಬ್ಬಂದಿ ಚೇತನ, ಕೃಷಿ ಉದ್ಯೋಗ ಸಖಿ ಅರುಣಾ, ಪಶು ಸಖಿ ಪದ್ಮಿನಿ, ಬಿ.ಸಿ. ಸಖಿ ದೀಪಿಕಾ, ಶೋಭಾ ಕಾರ್ಯಕ್ರಮದಲ್ಲಿ ಸಹಕರಿಸಿದರು. ಆಗಮಿಸಿದ ಎಲ್ಲರಿಗೂ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.