





ಕಾಣಿಯೂರು: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಆ.10ರಂದು ಭೇಟಿ ನೀಡಿದ್ದಾರೆ. ದೇವರ ದರ್ಶನಕ್ಕಾಗಿ ಆಗಮಿಸಿದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ದಂಪತಿಗಳು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಾಲಯದ ಪರವಾಗಿ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಪ್ರಮೋದ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.












