ಗುಂಡ್ಯ: ಹೆದ್ದಾರಿ ಬದಿ ನಿಲ್ಲಿಸಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದ ಕಂಟೈನರ್, ಕಾರು ಜಖಂ

0

ನೆಲ್ಯಾಡಿ: ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿ ನಿಲ್ಲಿಸಿದ್ದ ಸಿಫ್ಟ್ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲಿ ಆ.10ರಂದು ಸಂಜೆ ನಡೆದಿದೆ.


ಧರ್ಮಸ್ಥಳದಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿನಲ್ಲಿದ್ದವರು ಬರ್ಚಿನಹಳ್ಳದಲ್ಲಿ ಕಾರು ನಿಲ್ಲಿಸಿ ಕಾರಿನಿಂದ ಇಳಿದು ಹೋಗಿದ್ದರು. ಇದೇ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರಿನ ಮೇಲೆಯೇ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿ ಐವರು ಪ್ರಯಾಣಿಕರಿದ್ದು ಅವರೆಲ್ಲರೂ ಕಾರಿನಿಂದ ಇಳಿದು ಹೋಗಿರುವುದರಿಂದ ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here