ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಆಶ್ರಯದಲ್ಲಿ ಉಪ್ಪಿನಂಗಡಿ ಸರಕಾರಿ ಮಾದರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾಟದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಚೇತನ್ಕುಮಾರ್ ಮತ್ತು ರೋಹಿಣಿ ಅವರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಚೇತನ್ ಕುಮಾರ್, ಗೌತಮ್, ರೋಹಿಣಿ, ಅನ್ವಿತಾ ಎನ್ ಈ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹೇಮಾದರ್ ತರಬೇತಿ ನೀಡಿದ್ದರು. ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡ ಹಾಗೂ ಶಿಕ್ಷಕರು ಸಹಕರಿಸಿದರು.