ಅಕ್ಷಯ ಕಾಲೇಜಿನ ಇಂಟಿರೀಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಹೋಂ ಮಾಡೆಲ್ ಸ್ಪರ್ಧೆ

0

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ” ಹೋಂ ಮಾಡೆಲ್ ಮಾಸ್ಟರ್ಸ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

‘ಎಲೈಟ್ ಇಂಟಿರಿಯರ್ ಡಿಸೈನ್ ‘ ಸಂಘ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ ಎ ಉದ್ಘಾಟಿಸಿ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಯಾವುದೇ ರೀತಿಯ ಕಟ್ಟಡಗಳ ವಿನ್ಯಾಸದೊಂದಿಗೆ ಆಂತರಿಕ ವಿನ್ಯಾಸವು ಕೂಡ ಬಹಳ ಮಹತ್ವ ಪಡೆಯುತ್ತವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯನ್ನು ಅಭಿವೃದ್ಧಿ ಪಡಿಸಲು ಕಾರ್ಯಾಗಾರ ಪೂರಕವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಇಂಟಿರಿಯರ್ ಡಿಸೈನ್ ವಿಭಾಗದ ಮುಖ್ಯಸ್ಥ ರಕ್ಷಣ್ ಟಿ ಆರ್ , 3ಡಿ ಮಾಡೆಲ್ ವಿನ್ಯಾಸಕಾರರಿಗೆ ವಿವಿಧ ಆಯಾಮಗಳಲ್ಲಿ ತಮ್ಮ ಮೂಲ ದೃಷ್ಟಿ ಗೆ ಹೋಲಿಸಿದರೆ ಉದ್ದೇಶಿತ ವಿನ್ಯಾಸವು ರಚಿಸಲಾಗಿದೇಯೆ ಎಂದು ನೋಡಲು ಸಹಾಯವಾಗುತ್ತದೆ. ವಿನ್ಯಾಸವನ್ನು ಈ ರೀತಿ ನೋಡುವುದರಿಂದ ಉತ್ಪನ್ನಕ್ಕೆ ಅಗತ್ಯವಿರುವ ಸುಧಾರಣೆಗಳನ್ನು ಮಾಡಿಕೊಳ್ಳಬಹುದು. ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಆಂತರಿಕ ವಿನ್ಯಾಸದ ಆವಿಷ್ಕಾರ ಮತ್ತು ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ 3ಡಿ ಮಾಡೆಲ್ ತಯಾರಿಕೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು . ಇಂಟಿರಿಯರ್ ಡಿಸೈನ್ ವಿಭಾಗದ ಸಹ ಪ್ರಾಧ್ಯಾಪಕಿ ಕಾವ್ಯ ಎಂ ಸ್ವಾಗತಿಸಿ, ಪ್ರಾಧ್ಯಾಪಕ ಪ್ರತೀಕ್ ಡಿ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here