ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಪ್ರತಿ ವರ್ಷದಂತೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಒಂದು ವಾರಗಳ ಕಾಲ ನಡೆಯುವ ವಿವಿಧ ಸ್ಪರ್ಧೆಗಳ ಪೈಕಿ ಆ.11 ರಂದು ಚದುರಂಗ ಸ್ಪರ್ಧೆಯು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆಯಿತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಉಡುಪಿಯ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ನ ಪಿಡೆ ಆರ್ಬಿಟರ್ ಸಾಕ್ಷಾತ್ ಅವರ ನೇತೃತ್ವದಲ್ಲಿ ಚೆಸ್ ಸ್ಪರ್ಧೆ ನಡೆಯಿತು. ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಉಮಾನಾಥ್, ಸೌಂದರ್ಯ, ರಾಹುಲ್ ಅವರು ಸ್ಪರ್ಧಾ ನಿರ್ವಾಹಕರಾಗಿದ್ದರು.
ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಗುರು ಜಯಲಕ್ಷ್ಮೀ ರೈ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಸ್ಪರ್ಧಾ ಕಾರ್ಯದರ್ಶಿ ಶ್ರೀಕಾಂತ್ ಕಂಬಳಕೋಡಿ, ಸಮಿತಿ ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಜೊತೆ ಕಾರ್ಯದರ್ಶಿ ನೀಲಂತ್ , ಸ್ಪರ್ಧಾ ನಿರ್ವಾಹಕ ಪುಷ್ಪರಾಜ್, ಜಯಶ್ರೀ ಎಸ್ ಶೆಟ್ಡಿ, ವಿದ್ಯಾ ಗೌರಿ,ಮಲ್ಲೇಶ್ ಆಚಾರ್ಯ,ಆನಂದ್, ಮೋಹನ್,ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ರಮೇಶ್ ಸಹಿತ ಸಮಿತಿ ಸದಸ್ಯರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.