ಕಟ್ಟತ್ತಿಲ: ಬಸ್ಸು – ದ್ವಿಚಕ್ರ ವಾಹನ ಮಧ್ಯೆ ಅಪಘಾತ – ಓರ್ವನಿಗೆ ಗಾಯ

0

ವಿಟ್ಲ: ಖಾಸಗಿ ಬಸ್ಸು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು‌ ಗ್ರಾಮದ ಮೆದು ಕಟ್ಟತ್ತಿಲ ಎಂಬಲ್ಲಿ ನಡೆದಿದೆ.


ವಿಟ್ಲದಿಂದ ಮಂಗಳೂರು ತೆರಳಿ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಹಾಗೂ ವಿರುದ್ಧ ದಿಕ್ಕಿನಿಂದ ಬಂದ ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ಗಾಯಾಳು ಯುವಕ ಕಟ್ಟತ್ತಿಲ ಬಳಿಯ ನಿವಾಸಿಯಾಗಿದ್ದು, ಮೆದು ಪೆಟ್ರೋಲ್ ಪಂಪ್ ನಲ್ಲಿ ತನ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ. ಘಟ‌ನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here