ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಮೊಹಮ್ಮದ್ ಮನಾಫ್ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ

0

ವಿಟ್ಲ: ಶಿಕ್ಷಣ ಇಲಾಖೆ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದ 50 ಕೆಜಿ ಕೆಳಗಿನ ವಿಭಾಗದ ಕುಮುಟೆ ಸ್ಪರ್ಧೆಯಲ್ಲಿ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಮಹಮ್ಮದ್ ಮನಾಫ್ ರವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರಿಂದ ಕರಾಟೆ ತರಬೇತಿ ಪಡೆಯುತ್ತಿರುವ ಮಹಮ್ಮದ್ ಮನಾಫ್ ರವರು ಕಂಬಳಬೆಟ್ಟು ಎನ್ ಮೊಹಮ್ಮದ್ ಮತ್ತು ಫಾತಿಮಾ ದಂಪತಿಯ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here