ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿಯರು ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇದೇ ಆಗಸ್ಟ್ 10 ರಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


9ನೇ ತರಗತಿ ವಿದ್ಯಾರ್ಥಿನಿಯರಾದ ಪೂರ್ವಿ ಬಿ ಕೆ ( ಬಾಲಕೃಷ್ಣ ಪೂಜಾರಿ ಮತ್ತು ಲಕ್ಷ್ಮಿ ದಂಪತಿ ಪುತ್ರಿ) ಮತ್ತು ದೃಶ್ಯ ಯು ವೈ (ಉಮೇಶ್ ಎಂ ಮತ್ತು ಯಶವಂತಿ ದಂಪತಿ ಪುತ್ರಿ )ಇಬ್ಬರೂ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here