ಬೆಟ್ಟಂಪಾಡಿ : ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ, ಪುಸ್ತಕ ಪ್ರದರ್ಶನ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
“ನನ್ನ ಗ್ರಂಥಾಲಯವನ್ನು ಹೇಗೆ ಪರಿಣಾಮಕಾರಿಯಾಗಿ ನಾನು ಬಳಸಿಕೊಳ್ಳಬಹುದು” ಎಂಬ ವಿಷಯದ ಕುರಿತಾಗಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ನಿರೀಕ್ಷಿಣ್ ಸಿಂಗ್ ಗೌಗಿ ವಿಶೇಷ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ರಾಜ್ಯಪ್ರಶಸ್ತಿ ಪುರಸ್ಕೃತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಆಗಮಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ರಕ್ಷಕ ಶಿಕ್ಷಕ ಸಂಘದ ಪ್ರತಿನಿಧಿ ರಾಜಗೋಪಾಲ ರೈ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿಯವರು ವಹಿಸಿದ್ದರು. ಗಣ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಡಾ ಎಸ್ ಆರ್ ರಂಗನಾಥನ್ ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಗೈದರು. ವೇದಿಕೆಯಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ರಾಮಚಂದ್ರ ಡಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪೊಡಿಯ, ಹಿಂದಿ ವಿಭಾಗ ಮುಖ್ಯಸ್ಥೆ ಡಾ. ಕರುಣಾ ಲಕ್ಷ್ಮಿ ಉಪಸ್ಥಿತರಿದ್ದರು.
ಗ್ರಂಥಪಾಲಕ ರಾಮ ಕೆ ಸ್ವಾಗತಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿನಿಯರಾದ ದೀಕ್ಷಾ, ದೀಕ್ಷಿತಾ, ಚೈತ್ರ ಹಾಗೂ ವೀಕ್ಷಿತಾ ಪ್ರಾರ್ಥಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ದೀಪ್ತಿ ವಂದಿಸಿದರು.