ಆಲಂಕಾರು ಶ್ರಿ ಭಾರತಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭಾರತಿಯ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

0

ಬದುಕಿನಲ್ಲಿ ಓದು ಮುಖ್ಯ ಅಲ್ಲ ಮೌಲ್ಯಗಳೇ ನಮ್ಮ ಬದುಕಾಗಬೇಕು,ನಮ್ಮನ್ನು ಆಳಬೇಕು -ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ. ಎಸ್

ಆಲಂಕಾರು:ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಬಾಲಕ ಮತ್ತು ಬಾಲಕಿಯರ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿಪೂರ್ವ ವಿಭಾಗದ ಚೆಸ್ ಪಂದ್ಯಾಟ -2024,ಆಲಂಕಾರು ಶ್ರಿ ಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಸಮಾರಂಭದ ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಇಂದುಶೇಖರ ಶೆಟ್ಟಿ ಬರೆಪುದೇಲು ವಹಿಸಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಕಾರ್ಯದರ್ಶಿ ಡಾ. ಕೃಷ್ಣ ಭಟ್ ದೀಪ ಪ್ರಜ್ವಲಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.


ಮುಖ್ಯ ಅತಿಥಿ ಉಪ್ಪಿನಂಗಡಿ ಸರ್ಕಲ್ ನ ,ಸರ್ಕಲ್ ಇನ್ಸ್‌ಪೆಕ್ಟರ್ ಆಫ್ ಪೋಲಿಸ್ ರವಿ ಬಿ. ಎಸ್ ಮಾತನಾಡಿ, ವಿದ್ಯಾರ್ಥಿಗಳ ಬದುಕಿನಲ್ಲಿ ಕೇವಲ ಪಠ್ಯ ವಿಷಯವೇ ಮುಖ್ಯವಲ್ಲ.ಪಠ್ಯದ ಜೊತೆಗೆ ಜೀವನ ಮೌಲ್ಯಗಳು,ಸಂಸ್ಕಾರಗಳು ರೂಢಿಯಾಗಬೇಕು. ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ದೃಢನಿರ್ಧಾರ ಕೈಗೊಳ್ಳುವ ಗುಣ ಮೈಗೂಡಿಸಿಕೊಳ್ಳಬೇಕು. ಆಟದಲ್ಲಿಯೂ ಜೀವನದಲ್ಲಿಯೂ ಗೆಲುವು ನಿಮ್ಮದಾಗಲಿ ಎಂದು ಶುಭಹಾರೈಸಿದರು.


ಶಾಲಾ ಕನ್ನಡ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಆಶಾ. ಎಸ್.ರೈ ಸ್ವಾಗತಿಸಿ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ಜಿ. ಆರ್ ವಂದಿಸಿದರು.ಚಂದ್ರಹಾಸ ಕೆ. ಸಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಸಹಕರಿಸಿದರು.

LEAVE A REPLY

Please enter your comment!
Please enter your name here