ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಹಾಗೂ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜ್ ನೆಲ್ಯಾಡಿ ಇದರ ಸಹಯೋಗದೊಂದಿಗೆ ಕಾಲೇಜ್ ಮಕ್ಕಳಿಗೆ ದುಶ್ಚಟದ ಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು ಉದ್ಘಾಟನೆಯನ್ನು ಏಲಿಯಾಸ್ ಎಂ.ಕೆ ಪ್ರಾಂಶುಪಾಲರು ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆ ನೆಲ್ಯಾಡಿ ಇವರು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಮಸ್ ಎಂ.ಐ ಮುಖ್ಯ ಗುರುಗಳು ಸೈಂಟ್ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿ ಇವರು ವಹಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ಮಾತನಾಡುತ್ತಾ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಬೇಕಾದರೆ ಯುವ ಜನತೆಯ ಪಾತ್ರ ಬಹಳ ಅಗತ್ಯ ಹದಿಹರೆಯದ ವಯಸ್ಸಿನಲ್ಲಿ ದಾರಿ ತಪ್ಪುವ ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಿರಬೇಕು. ಸಪ್ತ ವ್ಯಸನಗಳ ಬಗ್ಗೆ, ಪಂಚಮಹಾ ಕಾಯಿಲೆಯ ಬಗ್ಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸುಚಿತ್ರಾ ಜೆ. ಬಂಟ್ರಿಯಾಲ್ ಅಧ್ಯಕ್ಷರು ಜೆ.ಸಿ.ಐ ನೆಲ್ಯಾಡಿ, ಜಯಾನಂದ ಬಂಟ್ರಿಯಾಲ್ ಅಧ್ಯಕ್ಷರು ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಭಾಸ್ಕರ ಶೆಟ್ಟಿ ಅಧ್ಯಕ್ಷರು ನೆಲ್ಯಾಡಿ ಒಕ್ಕೂಟ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರಿಗೂ ಸ್ವಾಗತಿಸಿದರು. ನೆಲ್ಯಾಡಿ ವಲಯದ ಮೇಲ್ವಿಚಾರಕ ಆನಂದ ಡಿ.ಬಿ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಮೇಲ್ವೀಚಾರಕರಾದ ಸೋಮೇಶ್, ಸೇವಾ ಪ್ರತಿನಿಧಿಗಳಾದ ಮೋಹಿನಿ, ಹೇಮಾವತಿ, ನಮಿತಾ ಶೆಟ್ಟಿ, ವೇದಾ ಪಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಉಪನ್ಯಾಸಕರು ಉಪಸ್ಥಿತರಿದ್ದರು.