ಪುತ್ತೂರು: ತಾಲೂಕು ಮಹಿಳಾ ಒಕ್ಕೂಟ, ನವ್ಯಶ್ರೀ ಮಹಿಳಾ ಮಂಡಲ ಪುತ್ತೂರು, ವನಿತಾ ಸಮಾಜ ಹಾರಾಡಿ, ಲಯನ್ಸ್ ಕ್ಲಬ್ ಪುತ್ತೂರು, ಶಿವಳ್ಳಿ ಸಂಪದ ಮಹಿಳಾ ವಿಭಾಗ ಪುತ್ತೂರು ಇದರ ಆಶ್ರಯದಲ್ಲಿ ಆಟಿದ ಪೊರ್ಲು ಕಾರ್ಯಕ್ರಮ ಆ.13ರಂದು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಮಾಜಿ ಶಾಸಕ ಸಂಜೀವ ಮಠಂದೂರು ಚೆನ್ನೆಮಣೆ ಆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಆಟಿಯ ಆಚರಣೆ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿ ಲಯನ್ಸ್ ಹಾಗೂ ನವ್ಯಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಲಯನ್ ಪ್ರೇಮಲತಾ ರಾವ್ ಮತ್ತು ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಉಷಾ ನಾಯಕ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ವನಿತಾ ಸಂದರ್ಭೋಚಿತವಾಗಿ ಮಾತನಾಡಿದರು. ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶಾಂತಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಿವಳ್ಳಿ ಸಂಪದದ ಕಾರ್ಯದರ್ಶಿ ವೀಣಾ ಕೊಳತ್ತಾಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ನಡೆದ ಚೆನ್ನೆಮಣೆ ಮತ್ತು ಆಟಿಯ ತಿಂಡಿಯ ಸ್ಪರ್ಧೆಯನ್ನು ವತ್ಸಲರಾಜ್ಞಿ ನಡೆಸಿಕೊಟ್ಟರು. ರೇಣುಕಾ ಮತ್ತು ವಿನಯ ಪ್ರಾರ್ಥಿಸಿದರು. ತಾಲೂಕು ಮಹಿಳಾ ಒಕ್ಕೂಟದ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಒಕ್ಕೂಟದ ಜತೆ ಕಾರ್ಯದರ್ಶಿ ರಂಜನಿ ವಂದಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆ ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.