ಕಾವು: 2023-24ನೇ ಆರ್ಥಿಕ ವರ್ಷಾಂತ್ಯಕ್ಕೆ ಸಾಲ ವಸೂಲಾತಿಯಲ್ಲಿ ಶೇ.100 ಸಾಧನೆ ಮಾಡಿದ ತಾಲೂಕಿನ ಏಕೈಕ ಸಹಕಾರಿ ಸಂಘವಾದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಶಸ್ತಿಗೆ ಆಯ್ಕೆಯಾಗಿ, ಆ.14ರಂದು ಮಂಗಳೂರಿನಲ್ಲಿ ನಡೆದ ಎಸ್ ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ
ಮೂಡೆತ್ತಾಯ ಮತ್ತು ಸಿಇಓ ಕೇಶವಮೂರ್ತಿ ಪಿ.ಜಿ ರವರಿಗೆ ಶಾಲು ಹೊದಿಸಿ, ಸ್ಮರಣಿಕೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಎಸ್ ಸಿಡಿಸಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಲೋಕೇಶ್ ಚಾಕೋಟೆ, ಮೋಹನಾಂಗಿ ಬೀಜಂತಡ್ಕ, ಶ್ರೀಧರ್ ರಾವ್ ನಿಧಿಮುಂಡ, ರಾಮಣ್ಣ ನಾಯ್ಕ ಕುದ್ರೋಳಿ, ಲೋಹೀತ್ ಅಮ್ಮಿನಡ್ಕ, ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡರವರು ಉಪಸ್ಥಿತರಿದ್ದರು