ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ದ ವಿಟ್ಲ ಪೊಲೀಸ್ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಕುದ್ದುಪದವು ಸಮೀಪದ ಅಂಗಡಿಯೊಂದಕ್ಕೆ ತೆರಳಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳಿಗೆ ಅಂಗಡಿ ಮಾಲಕ ಅಶ್ರಫ್ ಎಂಬವರು ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಂಗಡಿ ಮಾಲಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಕೇರಳ – ಕರ್ನಾಟಕ ಗಡಿಪ್ರದೇಶವಾದ ಆನೆಕಲ್ಲು ಸಮೀಪದ ಗೂವೆದಪಡ್ಪುವಿನಲ್ಲಿ ಬಂಧಿಸಿರುವುದಾಗಿ ಮಾಹಿತಿ ಲಭಿಸಿದೆ.