ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನೆಗೆ 6ನೇ ಬಾರಿಗೆ ಪ್ರಶಸ್ತಿ-ಸನ್ಮಾನ

0

ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅತ್ಯುತ್ತಮ ಸಾಧನೆಗಾಗಿ ಸತತವಾಗಿ 6 ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ಪುರಸ್ಕೃತವಾಗಿದ್ದು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಆರ್ಯಾಪು ಸೊಸೈಟಿಯ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್ ರವರನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ. ಎನ್ ರಾಜೇಂದ್ರಕುಮಾರ್, ಸಹಕಾರಿ ಇಲಾಖೆಯ ಜಿಲ್ಲಾ ಉಪ – ನಿಬಂಧಕರಾದ ಎಚ್ ಆರ್ ರಮೇಶ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ, ಸದಾಶಿವ ಉಲ್ಲಾಲ್, ರಾಜು ಪೂಜಾರಿ ಬೈಂದೂರು, ಎಸ್ ಎ ಮನ್ಮತ ಸುಳ್ಯ, ಜಿಲ್ಲಾ ಸಹಕಾರಿ ಯೂನಿಯನ್  ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ,ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here