ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಪ್ರಶಸ್ತಿ ಪ್ರದಾನ

0

ಪುತ್ತೂರು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಗಣನೀಯ ಸಾಧನೆಯನ್ನು ಪರಿಗಣಿಸಿ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ7ನೇ ಬಾರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.

ಆ 14ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ ಎಂ. ಎನ್. ರಾಜೇಂದ್ರಕುಮಾರ್ ರವರು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾ ಬಿ ರೈಯವರಿಗೆ ಪ್ರಶಸ್ತಿ ಪತ್ರ ಸ್ಮರಿಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು,ಎಸ್. ಬಿ. ಜಯರಾಮ ರೈ,ಜಿಲ್ಲಾ ಸಹಕಾರಿ ಯೂನಿನ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ,ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ ಜೈನ್ ನೀರ್ಪಾಜೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here