ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರೋತ್ಸಾಹ ಪ್ರಶಸ್ತಿ ಗೌರವ ಪ್ರದಾನ

0

ಪುತ್ತೂರು: 2023-24 ನೇ ಆರ್ಥಿಕ ವರ್ಷಕ್ಕೆ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಗಣನೀಯ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹಕ ಪ್ರಶಸ್ತಿ ಗೌರವ ಪ್ರದಾನ ಆ.14 ರಂದು ನಡೆಯಿತು.

ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ, ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ ರೈ ಬೊಳಿಕ್ಕಲಮಠ, ನಿರ್ದೇಶಕರುಗಳಾದ ರಾಮಣ್ಣ ಗೌಡ, ಪದ್ಮನಾಭ ಪಿ.ಎಸ್, ವಿನಯಚಂದ್ರ ಪಿ.ಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here