ಪುತ್ತೂರು: ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸರ್ವತೋಮುಖ ಪ್ರಗತಿಯ ಸಾಧನೆಗೆ ಸಂಬಂಧಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಿಶೇಷ ಸಾಧನಾ ನೀಡಿ ಗೌರವಿಸಲಾಯಿತು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ನೀಡುವ ಮೂಲಕ ಸಂಘದ ಅಧ್ಯಕ್ಷ ಗೌರಿ ಬನ್ನೂರು ಮತ್ತು ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪುತ್ತೂರು, ನೆಹರುನಗರ, ದರ್ಬೆ, ಉಪ್ಪಿನಂಗಡಿ, ಕಾಣಿಯೂರಿನಲ್ಲಿ ಶಾಖೆಗಳನ್ನು ಹೊಂದಿರುವ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘವು 5ನೇ ಭಾರಿಗೆ ವಿಶೇಷ ಸಾಧನಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ನಿರ್ದೇಶಕರಾದ ವತ್ಸಲಾ ರಾಜ್ಞಿ , ಪ್ರೇಮಲತಾ ರಾವ್ ಟಿ, ವಿಜಯಲಕ್ಷ್ಮಿ, ಉಷಾಚಂದ್ರ ಮುಳಿಯ, ಜಯಶ್ರೀ ಎಸ್ ಶೆಟ್ಟಿ ಉಪಸ್ಥಿತರಿದ್ದರು.