ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಪ್ರಶಸ್ತಿ

0

ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘವು ಸತತ ೧೮ನೇ ಬಾರಿಗೆ ಶೇ.೧೦೦ ವಸೂಲಾತಿಯ ಸಾಧನೆ ಮಾಡಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧಕ ಪ್ರಶಸ್ತಿಯನ್ನು ಸ್ವೀಕರಿಸಿದೆ


ಸಂಘವು ಪೆರ್ನೆ ಹಾಗೂ ಬಿಳಿಯೂರು ಗ್ರಾಮಗಳ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು, ೨೦೨೩-೨೪ನೇ ಸಾಲಿಗೆ ೩೮.೭೫ ಕೋಟಿ ವ್ಯವಹಾರ ನಡೆಸಿ, ೫೫.೨೬ ಲಕ್ಷ ಲಾಭ ಗಳಿಸಿದೆ. ಸಂಘದ ಅಧ್ಯಕ್ಷರಾಗಿ ೨೦೦೬ರಿಂದ ನಿರಂತರವಾಗಿ ತೋಯಜಾಕ್ಷ ಶೆಟ್ಟಿ ಎಸ್. ಅವರೇ ಅಧ್ಯಕ್ಷರಾಗಿ ಆಯ್ಕೆಯಾಗಿಕೊಂಡು ಬರುತ್ತಿದ್ದು, ಅವರ ಅಧ್ಯಕ್ಷೀಯ ಅವಧಿಯಲ್ಲಿ ಸತತ ೧೮ನೇ ಬಾರಿಗೆ ಸಂಘವು ಶೇ.೧೦೦ ವಸೂಲಾತಿಯ ಸಾಧನೆಯನ್ನು ಮಾಡಿದೆಯಲ್ಲದೆ, ನಿರಂತರ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಅಲ್ಲದೇ, ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ


ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಎಸ್. ತೋಯಜಾಕ್ಷ ಶೆಟ್ಟಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪುಷ್ಪಾ ಡಿ. ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರಾದ ಸುನೀಲ್ ನೆಲ್ಸನ್ ಪಿಂಟೋ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಸೇರಿದಂತೆ ಇತರ ನಿರ್ದೇಶಕರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here