ಪುತ್ತೂರು: ಬನ್ನೂರಿನಲ್ಲಿರುವ ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ. ಎ ಇವರು ದ್ವಜಾರೋಹಣ ಮಾಡುವುದರೊಂದಿದೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 5 ಜನ ಪವರ್ ಮ್ಯಾನ್ಗಳ ಕಾರ್ಯದಕ್ಷತೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ವಿಜಯಲಕ್ಹ್ಮೀ, ಹಾಗೂ ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಘಟಕದ ಅಧ್ಯಕ್ಷ ಸೂರ್ಯನಾಥ ಆಳ್ವ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪುತ್ತೂರು ವಿಭಾಗದ ಸಹಾಯಕ ಲೆಕ್ಕಾಧಿಕಾರಿ ಜಯಪ್ರಕಾಶ್ ಸ್ವಾಗತಿಸಿ, ಹಿರಿಯ ಸಹಾಯಕ ಸಂಜೀವ ಗೌಡ ವಂದಿಸಿದರು.