ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಶತಮಾನೋತ್ಸವದ ಸಂಭ್ರಮದಲ್ಲಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.

ಪ್ರದೀಪ್ ಅರ್. ಗೌಡ ಅರುವಗುತ್ತು, ಕಾಣಿಯೂರು ಕುಮಾರ್ ಕ್ಲಿನಿಕ್ ನ ಡಾ. ಉದಯ ಕುಮಾರ್ ಶುಭಹಾರೈಸಿದರು. ಕಾಣಿಯೂರು ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕರುಗಳು , ಮಾಜಿ ಅಧ್ಯಕ್ಷರು, ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಂದೇ ಮಾತರಂ, ರಾಷ್ಟ್ರಗೀತೆ ಹಾಡಿದರು.

LEAVE A REPLY

Please enter your comment!
Please enter your name here