ನಿಡ್ಪಳ್ಳಿ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ

0

ನಿಡ್ಪಳ್ಳಿ; ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶಾಲಿನಿ ಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗೌರವ ಮತ್ತು ಜ್ಞಾನದೀಪ ಶಿಕ್ಷಕಿಯಾಗಿ 3 ವರ್ಷ ಸೇವೆ ಸಲ್ಲಿಸಿದ ಕು.ಕುಸುಮ ಸಿ.ಎಚ್ ಇವರನ್ನು ಗೌರವಿಸಿ ಬೀಳ್ಕೊಡಲಾಯಿತು.

ನಿವೃತ್ತ ಮುಖ್ಯ ಗುರು ಉದಯಕುಮಾರ್ ಶರವು, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಗಂಗಾಧರ ಸಿ.ಎಚ್, ಎಸ್.ಡಿ.ಎಂ.ಸಿ ಸದಸ್ಯ ಶಿವರಾಮ, ಅಂಗನವಾಡಿ ಕಾರ್ಯಕರ್ತೆ ಜಯಂತಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಗುರು ಹೇಮಾ. ಎನ್ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಸುಮ.ಡಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿಯರಾದ ಶೋಭಾ, ಶಾಲಿನಿ ಸಹಕರಿಸಿದರು. ಪೋಷಕರು, ಮಕ್ಕಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here