ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ಮೇನಾಲ ಇಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಪ್ರಾಂಶುಪಾಲ ರಾಜೀಶ್ ಕುಮಾರ್ ಧ್ವಜಾರೋಹಣ ಮಾಡಿದರು.

ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ಅಡ್ವೈಸರಿ ಬೋರ್ಡ್ ಸದಸ್ಯ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಹಿತವಚನ ನೀಡಿದರು. ವಿದ್ಯಾರ್ಥಿಗಳ ಮಾರ್ಚ್ ಪಾಸ್ಟ್ ಮತ್ತು ನೃತ್ಯ ಗಮನ ಸೆಳೆಯಿತು.

ವಿದ್ಯಾರ್ಥಿಗಳಿಗೆ ಭಾಷಣ ಹಾಡು ನೃತ್ಯ ಮೊದಲಾದ ವಿವಿಧ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೊನೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಈ ಸಂದರ್ಭ ಸಂಸ್ಥೆಯ ಕ್ಯಾಂಪಸ್ ಡೈರೆಕ್ಟರ್ ಅಬ್ದುಲ್ಲಾ ಮಧುರಾ, ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್, ಅಡ್ಮಿನ್ ಆಫೀಸರ್ ನಾಸೀರ್, ಮ್ಯಾನೇಜರ್ ರೈಹಾನಾ, ಶಿಕ್ಷಕ ವೃಂದ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here