ಪುಣಚ ಶ್ರೀದೇವಿ ವಿದ್ಯಾಕೇಂದ್ರದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಪುಣಚ: ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆ.15ರಂದು ಆಚರಿಸಲಾಯಿತು. ನಿವೃತ್ತ ಸೈನಿಕ, ಶಾಲಾ ಆಡಳಿತ ಸಮಿತಿ ಸದಸ್ಯ ಈಶ್ವರ ನಾಯ್ಕ ಬೇರಿಕೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಸ್ವಾತಂತ್ರೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು.ಆಡಳಿತ ಸಮಿತಿ ಅಧ್ಯಕ್ಷ ಜಯಶ್ಯಾಂ ನೀರ್ಕಜೆ, ಸಂಚಾಲಕ ರವೀಶ್ ಪೊಸವಳಿಕೆ, ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ಘೋಷ್’ವಾದನ,ಜೈಕಾರದ ಮೂಲಕ ಮೆರವಣಿಗೆ ಪರಿಯಾಲ್ತಡ್ಕಕ್ಕೆ ಸಾಗಿ ಬಂದು ಸಮಾಪನಗೊಂಡಿತು. ಅಲ್ಲಲ್ಲಿ ಸಿಹಿತಿಂಡಿ, ಪಾನೀಯದ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here