ಇಡ್ಯಡ್ಕ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

0

ಕಾಣಿಯೂರು: ಸ.ಕಿ.ಪ್ರಾ.ಶಾಲೆ ಇಡ್ಯಡ್ಕದಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಜಗದೀಶ ಇಡ್ಯಡ್ಕ ಇವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ತಾರಾನಾಥ್ ಇಡ್ಯಡ್ಕ ,ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಕೇಶವ ಇಡ್ಯಡ್ಕ, ಅಂಗನವಾಡಿ ಕಾರ್ಯಕರ್ತೆ ಅಕ್ಷತಾ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶಶಿಕಲಾ, ಶಾಲಾ ಅತಿಥಿ ಶಿಕ್ಷಕಿ ಮೋಹಿನಿ,ಎಸ್ ಡಿ ಎಂ ಸಿ ಸದಸ್ಯರು, ಪೋಷಕರು,ಊರಿನ ವಿದ್ಯಾಭಿಮಾನಿಗಳು, ಮಕ್ಕಳು ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯಗುರು ಛತ್ರಕುಮಾರ ಸಿ. ಯವರು ಸ್ವಾಗತಿಸಿದರು. ಶಾಲಾ ಮಕ್ಕಳು ವಿವಿಧ ದೇಶಭಕ್ತಿಗೀತೆ ಹಾಡಿದರು.

LEAVE A REPLY

Please enter your comment!
Please enter your name here