ಕೊಂಬಾರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಡಬ: ಕೊಂಬಾರು ಪಂಚಾಯತ್ ನಲ್ಲಿ 78 ನೇ ಸ್ವಾತಂತ್ರ್ಯ ದಿನಾನಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಧುಸೂದನ್ ಇವರು ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಜಯಶ್ರೀ ರಾಮಚಂದ್ರ ಗೌಡ, ಚೆನ್ನಕೇಶವ ಗೌಡ, ವೀಣಾ, ಸರಿತಾ , ಸದಾನಂದ, ಗಣೇಶ್ ಪಿಲಿಕಜೆ, ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಅರೋಗ್ಯ ಅಧಿಕಾರಿ , ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ .ಎಲ್ ಸಿ. ಆರ್ ಪಿ.ಹಾಗು ವಿವಿಧ ಸಖಿಗಳು ,ಆಶಾ ಕಾರ್ಯಕರ್ತೆಯರು ಸಂಜೀವಿನಿ ಒಕ್ಕೂಟದ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು,ಅಂಗಡಿ ಮಾಲಿಕರು ಹಾಗು ಊರಿನ ಎಲ್ಲಾ ನಾಗರಿಕರು ಮತ್ತು ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು, ಉಪಸ್ಥಿತರಿದ್ದರು .
ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಸಮಿತಿ ವತಿಯಿಂದ ಪ್ರತಿ ಮನೆ ಮನೆಯಿಂದ ಕಸ ಸಂಗ್ರಹ ಮಾಡುವ ಬಗ್ಗೆ ಅಧಿಕೃತ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here