ಪಾಪೆಮಜಲು ಸ.ಹಿ.ಪ್ರಾ. ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಅರಿಯಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಪೆ ಮಜಲು ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು. ಎಸ್, ಡಿ. ಎಮ್. ಸಿ. ಅಧ್ಯಕ್ಷರಾದ ದಿನೇಶ್ ಕುಮಾರ್ ಎಂ ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್, ಉಪಾಧ್ಯಕ್ಷರಾದ ಮೀನಾಕ್ಷಿ ಪಾಪೆಮಜಲು ,ಪಂಚಾಯತ್ ಸದಸ್ಯರುಗಳು, ಮಾಜಿ ಸೈನಿಕರಾದ ಶ್ರೀ ಅಮ್ಮಣ್ಣ ರೈ, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪೋಷಕರು,ಹಿರಿಯ ವಿದ್ಯಾರ್ಥಿಗಳು, ಎಸ್. ಡಿ. ಎಮ್. ಸಿ. ಸದಸ್ಯರು, ಅಂಗನವಾಡಿ ಸಿಬ್ಬಂದಿಗಳು , ಶಾಲಾ ಮುಖ್ಯ ಗುರುಗಳು ಮತ್ತು ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಪುಟಾಣಿಗಳು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಶಾಲಾ ಮುಖ್ಯ ಗುರುಗಳಾದ ಶಶಿಕಲಾ ಎಂ ರವರು ಸರ್ವರನ್ನು ಸ್ವಾಗತಿಸಿದರು. ಶಿಕ್ಷಕ ವೃಂದ ದವರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ನಂತರ ಕೌಡಿಚ್ಚಾರು ತನಕ ಜಾಥಾ ನಡೆಯಿತು.

LEAVE A REPLY

Please enter your comment!
Please enter your name here