ನೆಲ್ಯಾಡಿ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಸೈನಿಕ ಚಾಕೋಚ ಅವರು ಧ್ವಜಾರೋಹಣಗೈದು ಹಾರೈಸಿದರು.


ವೇದಿಕೆಯಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿ- ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಚಾಕೋಚ ಅವರನ್ನು ಸನ್ಮಾನಿಸಲಾಯಿತು. ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ರವಿಪ್ರಸಾದ್ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಆಟೋ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here