ನಾಣಿಲ ಶಾಲೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ವಹಿಸಿದ್ದರು. ಅತಿಥಿಗಳಾಗಿ ಪ್ರದೀಪ್ ಗೌಡ ಅರುವಗುತ್ತು, ವಿಜಯ್ ಕುಮಾರ್ ಸೊರಕೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣೆಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ ಸದಸ್ಯೆ ಕೀರ್ತಿ ಕುಮಾರಿ ಅಂಬುಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಿತ್ ಮಾಚಿಲ, ನೇಮಣ್ಣ ಗೌಡ ಅಂಬುಲ, ಧರ್ಮಪ್ಪ ಗೌಡ ಅಂಬುಲ, ವೀಣಾ ಹರೀಶ್ ಅಂಬುಲ, ಮೋನಪ್ಪ ಗೌಡ ಅಂಬುಲ, ಕೆ ವಿ ಮಾಧವ ಕುಸುಮಾವತಿ ಕಳ, ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು ಪೋಷಕರು ಊರಿನವರು, ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪದ್ಮಯ ಗೌಡ ಸ್ವಾಗತಿಸಿ, ಸಹಸಿಕ್ಷಕಿ ಶೋಭಾ ವಂದಿಸಿದರು. ಸಹ ಶಿಕ್ಷಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here