





ಪುತ್ತೂರು:ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ 78 ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಪ್ಯ ನವಚೇತನಾ ಯುವಕ ಮಂಡಲದ ಉಪಾಧ್ಯಕ್ಷ ಸುರೇಶ್ ಪೂಜಾರಿ ಹಾಗೂ ಜತೆ ಕಾರ್ಯದರ್ಶಿ ರವಿ ಗೌಡ ಬೈಲಾಡಿ ಧ್ವಜಾರೋಹಣ ನೆರವೇರಿಸಿದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ನವಚೇತನ ಯುವಕ ಮಂಡಲದ ಅಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ ಸ್ವಾತಂತ್ರ್ಯ ದಿನದ ಬಗ್ಗೆ ಮಾತನಾಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಲಕ್ಷ್ಮಣ್ ಬೈಲಾಡಿ, ಶಶಿಕಲಾ ನಿರಂಜನ ರೈ, ಅರ್ಚಕ ಮೋಹನ ರಾವ್ ಪಜಿಮಣ್ಣು ಆರೋಗ್ಯ ರಕ್ಷಾ ಸಮಿತಿ, ನವಚೇತನ ಯುವಕ ಮಂಡಲದ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಉಮೇಶ್ ಎಸ್.ಕೆ ಸ್ವಾಗತಿಸಿದರು. ಸಂತೋಷ್ ಮುಕ್ರಂಪಾಡಿ ವಂದಿಸಿದರು. ಉದಯ ಕುಮಾರ್ ರೈ ಎಸ್ ಕಾರ್ಯಕ್ರಮ ನಿರೂಪಿಸಿದರು.















