ಕಾಣಿಯೂರು ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪರಮೇಶ್ವರ ಗೌಡ ಅನಿಲ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಗೌಡ ಮೂಗರಂಜ, ವಸಂತ ಪೆರ್ಲೋಡಿ, ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ, ಸಿ ಅರ್ ಪಿ ಯಶೋದ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋದ ನೇರೋಳ್ತಡ್ಕ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಸ್ವಾತಂತ್ರ್ಯೋತ್ಸವದ ಮೆರವಣಿಗೆ ನಡೆಯಿತು.

LEAVE A REPLY

Please enter your comment!
Please enter your name here