ಪುತ್ತೂರು :ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು ಸ್ವಾತಂತ್ರದ ಮಹತ್ವವನ್ನು ವಿವರಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಸಂಸ್ಥೆಯ ಸಂಚಾಲಕರಾದ ಹಾಜಿ ಮುಹಮ್ಮದ್ ಸಾಬ್ ರವರು ಮಾತನಾಡಿ, ಸ್ವತಂತ್ರೋತ್ಸವದ ಶುಭಾಶಯಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ, ಟ್ರಸ್ಟಿಗಳಾದ ಯೂಸುಫ್ ಹಾಜಿ, ಇಬ್ರಾಹಿಂ ಹಾಜಿ, ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್‌ನ ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಸಾಲ್ಮರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೋಹನಾಂಗಿ, ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗದ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಇಸ್ಮಾಯಿಲ್, ಉಸ್ಮಾನ್, ಉಪಾಧ್ಯಕ್ಷೆ ಸಫ್ವಾನ, ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಝುಲೈಖಾಬಿ ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತಿಸಿದರು. ಶಿಕ್ಷಕರಾದ ರವೂಫ್ ಕಾರ್ಯಕ್ರಮ ನಿರ್ವಹಿಸಿ, ಮಂಜುನಾಥ ರೈ ವಂದಿಸಿದರು. ದೈಹಿಕ ಶಿಕ್ಷಕರಾದ ಅಶ್ರಫ್ ಮತ್ತು ಜಯರಾಮ್ ಸಹಕರಿಸಿದರು. ಸಂಸ್ಥೆಯ ಶಿಕ್ಷಕ ವೃಂದ ಮತ್ತು ಶಿಕ್ಷೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.