ಕಾಣಿಯೂರು:ಚಾರ್ವಾಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಲೋಕೇಶ್ ಎಣ್ಮೂರುರವರು ಧ್ವಜಾರೋಹಣವನ್ನು ನೆರವೇರಿಸಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ .ಆರ್ .ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಶಾಲಾ ನಾಯಕ ಮಾಸ್ಟರ್ ಚಂದನ್ ನಾಯಕತ್ವದಲ್ಲಿ ಆಕರ್ಷಕ ಕವಾಯತು ನಡೆಯಿತು. ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಉದನಡ್ಕ, ಮೀರಾ ಕಳೆಂಜೋಡಿ, ನಿವೃತ್ತ ಮುಖ್ಯ ಶಿಕ್ಷಕರಾದ ಜನಾರ್ದನ ಗೌಡ,ನಿಕಟಪೂವ೯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗೋಪಾಲಕೃಷ್ಣ ಬಾರೆಂಗಳ, ರಾಮಣ್ಣ ಗೌಡ ಪೊನ್ನೆತ್ತಡಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಸಾರಿಕಾ ದೇವರತ್ತಿಮಾರು, ಚಾರ್ವಾಕ ಅಂಚೆ ಇಲಾಖಾ ಸಿಬ್ಬಂದಿ ನಾರಾಯಣ ಗೌಡ ಕೋಲ್ಪೆ , ಚಾರ್ವಾಕ ಸಿ ಎ ಬ್ಯಾಂಕ್ ನ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಮತ್ತು ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯಗುರು ಚೆನ್ನಪ್ಪ ಗೌಡರವರು ಸ್ವಾಗತಿಸಿದರು. ಜಿಪಿಟಿ ಶಿಕ್ಷಕಿ ನಯನರವರು ಕಾರ್ಯಕ್ರಮ ನಿರೂಪಣೆಗೈದರು. ಅತಿಥಿ ಶಿಕ್ಷಕರಾದ ಹರ್ಷಿತಾ ಮತ್ತು ಜೀವಿತಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿದರು. ಹಿರಿಯ ಸಹಶಿಕ್ಷಕರಾದ ಆಶಾಲತಾರವರು ವಂದಿಸಿದರು.