ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಗುರುಂಪು ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗೋಳಿತ್ತೊಟ್ಟು ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಟೇರಿ, ಉಪಾಧ್ಯಕ್ಷ ಬಾಬು ಪೂಜಾರಿ ಕಿನ್ಯಡ್ಕ, ಸದಸ್ಯರಾದ ಹೇಮಲತಾ ಮುರಿಯೇಲು, ಶಾಂತಿನಗರ ಆದರ್ಶ ಯುವಕ ಮಂಡಲ ಅಧ್ಯಕ್ಷ ತೇಜಸ್ ಶಾಂತಿನಗರ, ಮುರಿಯೇಲು ಯುವಶಕ್ತಿ ಗೆಳೆಯರ ಬಳಗದ ಅಧ್ಯಕ್ಷ ಪವನ್‌ಕುಮಾರ್ ಕುದ್ಮಾರುಗುತ್ತು, ಶಾಲಾ ದಾನಿಗಳಾದ ನಾರಾಯಣ ಪೂಜಾರಿ ಡೆಂಬಲೆ, ಗಣಪಯ್ಯ ಭಟ್, ರಜತ್‌ಕುಮಾರ್ ಜೈನ್ ಶಾಂತಿಮಾರು, ಪದ್ಮಯ್ಯ ಗೌಡ ಡೆಂಬಲೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗುರುಂಪು ವಹಿಸಿದ್ದರು.



ಸನ್ಮಾನ:
ಶಾಲೆಯ ಪ್ರಗತಿಗೆ ಶ್ರಮಿಸಿದ ಗೋಳಿತ್ತಟ್ಟು ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಜನಾರ್ದನ ಪಟೇರಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ದಾನಿಗಳಾದ ರಜತ್‌ಕುಮಾರ್ ಜೈನ್ ಅವರು ಶಾಲೆಯ ಗೌರವ ಶಿಕ್ಷಕರ ಒಂದು ತಿಂಗಳ ಸಂಭಾವನೆಯನ್ನು ತನ್ನ ಮಗುವಿನ ಹುಟ್ಟುಹಬ್ಬದ ಪ್ರಯುಕ್ತ ನೀಡಿದರು.
ಮುಖ್ಯಶಿಕ್ಷಕ ಪ್ರದೀಪ್ ಬಾಕಿಲ ಸ್ವಾಗತಿಸಿದರು. ಶಿಕ್ಷಕಿ ಪ್ರಮೀಳಾ ವಂದಿಸಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಸುನಂದ, ಮೋಹಿನಿ ಸಹಕರಿಸಿದರು. ವಿದ್ಯಾರ್ಥಿಗಳಿಂದ ಜಾಥಾ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 200ಕ್ಕಿಂತಲೂ ಹೆಚ್ಚು ವಿದ್ಯಾಭಿಮಾನಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here