ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸ

0

ವಿಟ್ಲ: ವಿದ್ಯಾಬಿವರ್ಧಕ ಸಂಘ (ರಿ) ಮಾಣಿ, ಕರ್ನಾಟಕ ಪ್ರೌಢ ಶಾಲೆ, ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ವಿದ್ಯಾಬಿವರ್ಧಕ ಸಂಘ ಮಾಣಿ ಇದರ ಅಧ್ಯಕ್ಷರಾದ ರೊ. ಕಿರಣ್ ಹೆಗ್ಡೆ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧ, ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಳೆ ವಿದ್ಯಾರ್ಥಿ ಜಗನ್ನಾಥ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕರಾದ ಬಿ.ಕೆ.ಭಂಡಾರಿ ಆಗಮಿಸಿ ಶುಭಹಾರೈಸಿದರು‌‌.
ದೇಶಪ್ರೇಮದ ವಿವಿಧ ಘೋಷಣೆ – ಬ್ಯಾಂಡು ಘೋಷಗಳೊಂದಿಗೆ ಮೆರವಣಿಗೆ ಮಾಣಿ ಜಂಕ್ಷನ್ ವರೆಗೆ ಸಾಗಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ತುಂಬೆ ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎನ್. ಗಂಗಾಧರ ಆಳ್ವ ,ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರುಗಳಾದ ಹರೀಶ್ ಮಾಣಿ ಮತ್ತು ಮೆಲ್ವಿನ್ ಕಿಶೋರ್ ಮಾರ್ಟಿಸ್, ಗ್ರಾ. ಪಂ. ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಎಸ್‌. ಚೆನ್ನಪ್ಪ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಾರಿಕಾ ವಂದಿಸಿ, ಹಿಂದಿ ಶಿಕ್ಷಕ ಜಯರಾಮ ಕಾಂಚನ, ಜಮೀಹ, ಸಾನಿಕ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here