ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜರೋಹಣವನ್ನು ಶಿವಪ್ಪ ಪೂಜಾರಿ ಮಾಜಿ ಅಧ್ಯಕ್ಷರು ಬಿ.ಎಂ.ಎಸ್. ಆಟೋಚಾಲಕ- ಮಾಲಕ ಸಂಘ ಪುತ್ತೂರು ಇವರು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಪೋಷಕರ ಆಸೆಯನ್ನು ನಿರಾಶೆಗೊಳಿಸದೆ ಉತ್ತಮ ಪ್ರಜೆಗಳಾಗಬೇಕು ಎಂದು ತಿಳಿಸಿದರು.
ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿರುವ ನಾರಾಯಣ ರೈ ಕುಕ್ಕುವಳ್ಳಿ ನಿವೃತ್ತ ಶಿಕ್ಷಕರು, ಸಾಹಿತಿ, ಬರಹಗಾರರು, ಸಂಪಾದಕರು, ಮಧುಪ್ರಪಂಚ ಇವರು ಮಾತನಾಡುತ್ತಾ ಹಿರಿಯರ ಬಲಿದಾನದಿಂದ ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಸಂರಕ್ಷಿಸೋಣ ಎಂದು ತಿಳಿ ಹೇಳಿ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿ ಸುನಿಲ್ ರಾಮಕೃಷ್ಣ(Muliya Health & Fitness Expert)ಇವರು ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ ಹಾಗೂ ಆಹಾರ ಅಭ್ಯಾಸದ ಕುರಿತು ಮಾಹಿತಿಯನ್ನು ನೀಡಿದರು.
ಯೋಗ ತೆರಪಿಸ್ಟ್ ಆದ ಸ್ವಾತಿ ಶೆಟ್ಟಿ ಇವರು ಮಾತನಾಡುತ್ತಾ ಬದುಕುವ ಮತ್ತು ಬದುಕಿನ ಕಲೆ ಯೋಗ. ನಮ್ಮ ಆಹಾರ ಕ್ರಮವನ್ನು ಬದಲಾಯಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಎಂದು ಮಾಹಿತಿ ನೀಡಿದರು.
ನಂತರ ವಿದ್ಯಾರ್ಥಿಗಳ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ ಗೋಕುಲ್‌ನಾಥ್ ಪಿ.ವಿ. ಮಾತನಾಡುತ್ತಾ ಇವತ್ತಿನ ಕಾಲದಲ್ಲಿ ಮನುಷ್ಯನಿಗೆ ಹಣಕ್ಕಿಂತ ಆರೋಗ್ಯ ಬಹಳ ಮುಖ್ಯ ಎಂದು ತನ್ನ ಜೀವನದಲ್ಲಿ ನಡೆದ ಘಟನೆಯ ಬಗ್ಗೆ ಉದಾಹರಣೆಯ ಮೂಲಕ ತಿಳಿಸಿದರು. ಕಾರ‍್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಲೆಕ್ಕಶಾಸ್ತ್ರ ಉಪನ್ಯಾಸಕಿಯಾದ ಮಾಧವಿ ಇವರು ನಿರೂಪಿಸಿದರು. ಕಾರ‍್ಯಕ್ರಮದ ಕೊನೆಗೆ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.
Home ಇತ್ತೀಚಿನ ಸುದ್ದಿಗಳು ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯೊಂದಿಗೆ Muliya Health & Fitness Expert ಸಂಸ್ಥೆಯಿಂದ...