ನಾರ್ಯಬೈಲು ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಕಾಣಿಯೂರು: ನಾರ್ಯಬೈಲು ಸ. ಕಿ. ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಮೋಹಿನಿ ನಾರ್ಯ ಧ್ವಜಾರೋಹಣ ನೆರವೇರಿಸಿದರು. ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಜಯಂತ ಅಬೀರ, ಸದಸ್ಯರುಗಳಾದ ಕುಸುಮ ಅಂಕಜಾಲು, ಉಮೇಶ್ವರಿ ಅಗಳಿ, ಗೌರಿ ಹಾಗೂ ಮೋಹನ ಅಗಳಿ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಮೋಹಿನಿ ನಾರ್ಯ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸೀತಾರಾಮ ಗೌಡ ಮುಂಡಾಲ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಮರಕ್ಕಡ, ಜೋಕಾಲಿ ಬಳಗದ ಅಧ್ಯಕ್ಷ ಚಂದ್ರಶೇಖರ ಮುಂಡಾಲ ಶುಭ ಹಾರೈಸಿದರು. ಬಾಲಿಕಾ ಸಮಿತಿಯ ಅಧ್ಯಕ್ಷರು, ಎಸ್.ಡಿ.ಎಂ.ಸಿ. ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಂಗನವಾಡಿ ಮಕ್ಕಳು , ಊರಿನವರು ಉಪಸ್ಥಿತರಿದ್ದರು. ಶಾಲೆಯ ವಿಧ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆಯನ್ನು ನಡೆಸಲಾಯಿತು. ಮುಖ್ಯ ಶಿಕ್ಷಕಿ ಜೋಯ್ಸ್ ಹೇಮಲತ ಗಂಗೇರ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸೌಮ್ಯ ವಂದಿಸಿದರು.

LEAVE A REPLY

Please enter your comment!
Please enter your name here