ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ, ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.


ಎಸ್.ಆರ್.ಕೆ ಲ್ಯಾಡರ್ಸ್‌ನ ಮಾಲಕರಾದ ಕೇಶವ ಎ.ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಶೋಕ್ ಕೊಯಿಲ, ಬಿಎಸ್‌ಎನ್‌ಲ್ ನಿವೃತ್ತ ನೌಕರ ದಿವಾಕರ ರಾವ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಾಧವ ಭಟ್ ಅವರು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಧ್ವಜಾರೋಹಣ ಮಾದರಿಯನ್ನು ತಯಾರಿಸಿದ್ದರು. ಈ ಮಾದರಿಯನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಬಹುಮಾನಗಳ ಪಟ್ಟಿಯನ್ನು ಶಿಕ್ಷಕಿ ಪುಷ್ಪಾವತಿ ವಾಚಿಸಿದರು. ಕ್ರೀಡಾ ಬಹುಮಾನಗಳನ್ನು ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈಯವರು ವಾಚಿಸಿದರು. ಪದವಿಪೂರ್ವ ವಿಭಾಗದ ಸಾಂಸ್ಕೃತಿಕ ಬಹುಮಾನಗಳ ಪಟ್ಟಿಯನ್ನು ಚೈತ್ರ ವಾಚಿಸಿದರು. ಕ್ರೀಡಾ ವಿಭಾಗದ ಬಹುಮಾನಗಳನ್ನು ಕಾಲೇಜಿನ ಶಾರೀರಿಕ ಶಿಕ್ಷಣದ ಉಪನ್ಯಾಸಕ ಗಣೇಶ್ ಅವರು ವಾಚಿಸಿದರು.


ಪ್ರಾಂಶುಪಾಲ ಚಂದ್ರಶೇಖರ್ ಅವರು ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಗುರು ಸತೀಶ್ ಭಟ್ ಅತಿಥಿಗಳನ್ನು ಪರಿಚಯಿಸಿದರು. ಅತಿಥಿಗಳನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು. ಉಪನ್ಯಾಸಕ ರವಿ ಭಟ್ ವಂದಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here