ಸೈಂಟ್ ಮೇರಿಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಪ್ಪಿನಂಗಡಿ: ಇಲ್ಲಿನ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ ಸಂಚಾಲಕರಾದ ಫಾ. ಜೆರಾಲ್ಡ್ ಡಿಸೋಜ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.


ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಆಲ್‌ಸ್ಟನ್ ಸೋನಿಲ್ ಡಾಯಸ್, ಶಾಲಾ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷೆ ಉಷಾ, ಶಾಲಾ ಮುಖ್ಯೋಪಾಧ್ಯಾಯಿನಿ ಮೀರಾ ಮರ್ಲಿನ್ ರೊಡ್ರಿಗಸ್, ಸಂತ ಫಿಲೋಮಿನಾ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಸೈಂಟ್ ಮೇರಿಸ್ ನರ್ಸರಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ವಲೆಂಟಿನ ಭಾಗವಹಿಸಿದ್ದರು.


ವಿದ್ಯಾರ್ಥಿನಿ ಕು. ಅಫೀಫ ಸ್ವಾತಂತ್ರ್ಯ ದಿನಾಚರಣೆಯ ಪ್ರಾಮುಖ್ಯತೆ ಮತ್ತು ವಿಶೇಷತೆಯ ಬಗ್ಗೆ ಮಾತನಾಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಜಾಸ್ನಿನ್ ಡಿಸೋಜ ಸ್ವಾಗತಿಸಿದರು. ಶ್ರೀಮತಿ ಅಕ್ಷಿತಾ ವಂದಿಸಿದರು. ಪವಿತ್ರಾ ಕಾರ್ಲೊ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here