ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 78ನೇ ಸ್ವಾತಂತ್ರ್ಯೊತ್ಸವದ ಆಚರಣೆ

0

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆ.15ರಂದು 78ನೇ ಸ್ವಾತಂತ್ರ್ಯೊತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ರವಿಮುಂಗ್ಲಿಮನೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ “ದೇಶದ್ರೋಹವೆಸಗುವ ವೈರಿಗಳನ್ನು ಎದುರಿಸುವ ಧೈರ್ಯ ನಿಮಗೆ ಬರಲಿ ಎಂದು ನುಡಿದು ಶುಭಹಾರೈಸಿದರು. ಈ ಕಾರ‍್ಯಕ್ರಮವು ಕಾಲೇಜಿನ ಪ್ರಾಂಶುಪಾಲ ಮುರಳೀಧರ್ ಎಸ್. ಉಪಸ್ಥಿತಿಯಲ್ಲಿ ಆಯೊಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಶಿಕ್ಷಕ-ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here