ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಡಾ. ಶಶಿಧರ್ ಪೆರುವಾಜೆ ದುರ್ಗಾ ಕ್ಲಿನಿಕ್ ಕಾಣಿಯೂರು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿರುವ ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಈ ರಾಷ್ಟ್ರ ನಾಯಕರು ನಮಗೆ ಆದರ್ಶಪ್ರಾಯರಾಗಿದ್ದು ಅವರ ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ದೇಶದ ಘನತೆ ಗೌರವವನ್ನು ಹೆಚ್ಚಿಸಿ ಮುಂದೊಂದು ದಿನ ರಾಷ್ಟ್ರದ ಸತ್ಪ್ರಜೆಯಾಗಿ ಬಾಳಿ, ರಾಷ್ಟ್ರಪ್ರೇಮಿಗಳಾಗಿರಬೇಕು ಎಂದರು. ಚಾರ್ವಕ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ ಇವರು ವಿಕಸಿತ ಭಾರತವನ್ನು ಕಾಣುವ ಕಡೆಗೆ ನಾವೆಲ್ಲರೂ ಭರವಸೆಯಿಂದ ಕಾತುರಾರಗಬೇಕೆಂದು ಆಶಯವನ್ನು ವ್ಯಕ್ತಪಡಿಸಿದರು. ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ ಇವರು ಮಾತನಾಡುತ್ತಾ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು. ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ ಅವರು ಮಾತನಾಡುತ್ತಾ ದೇಶಪ್ರೇಮ ನಮ್ಮ ಉಸಿರಾಗಬೇಕು, ರಕ್ತದ ಕಣ-ಕಣದಲ್ಲೂ ದೇಶಭಕ್ತಿ ಹರಿದಾಡಬೇಕು ಎಂದರು. ಶಾಲಾ ಆಡಳಿತ ಸಮಿತಿಯ ಸದಸ್ಯ ನಾಗೇಶ್ ರೈ ಮಾಳ, ಶಾಲಾ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ, ಹಿರಿಯ ಶಿಕ್ಷಕಿ ಸವಿತಾ ಕೆ ಮತ್ತು ವಿದ್ಯಾರ್ಥಿ ನಾಯಕ ಪ್ರಸ್ತುತ್ ಕೆ ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಮುಖ್ಯಗುರು ವಿನಯ ವಿ ಶೆಟ್ಟಿ ವಂದಿಸಿದರು.

ಮೆರುಗು ನೀಡಿದ ಮೆರವಣಿಗೆ

ಧ್ವಜಾರೋಹಣದ ಬಳಿಕ ಕಾಣಿಯೂರು ಮುಖ್ಯರಸ್ತೆಯ ಮೂಲಕ ಅದ್ದೂರಿ ಮೆರವಣಿಗೆ ನಡೆಯಿತು. ಪುಟಾಣಿಗಳು ಸ್ವಾತಂತ್ರ್ಯ ಹೋರಾಟಗಾರರ ವಿವಿಧ ವೇಷಭೂಷಣವನ್ನು ಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಶಿಕ್ಷಕಿಯರಾದ ಚಿತ್ರಕಲಾ .ಟಿ ಮತ್ತು ಪವಿತ್ರ. ಕೆ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಚಿತ್ರಕಲಾ ಎಂ ಸಹಕರಿಸಿದರು.

LEAVE A REPLY

Please enter your comment!
Please enter your name here