ಪುತ್ತೂರು: ಕೊಳ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜೊತೆಗೆ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣೆಯೂ ಆ.15 ರಂದು ಶಾಲಾ ಆವರಣದಲ್ಲಿ ನಡೆಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಮೇರಡ್ಕ ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಬಳಿಕ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಶ್ಯಾಮಸುಂದರ ರೈ, ಬಾಲಕೃಷ್ಣ ಪಡ್ರೆ, ಯತೀಂದ್ರ ಕೊಚ್ಚಿ ಹಾಗೂ ಹೈಕೋರ್ಟು ನ್ಯಾಯವಾದಿ ಮೋಹಿತ್ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಕೃಷ್ಣಪ್ಪಗೌಡ ಬಾಯಂಬಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯತ್ ಕೆಮ್ಮಾರ, ಶಾಲಾ ಪ್ರಭಾರ ಮುಖ್ಯಗುರು ರವಿರಾಜ್ ಹಾಜರಿದ್ದರು.
ಬಳಿಕ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ನಡೆದು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನೆರವೇರಿತು. ಪಂಚಾಯತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯರು ಕೂಡ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಗೌರವ ಶಿಕ್ಷಕಿ ಭವ್ಯ ಸ್ವಾಗತಿಸಿ, ರವಿರಾಜ್ ಕೆ ಧನ್ಯವಾದ ಅರ್ಪಿಸಿದರು. ಸಹಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ತದನಂತರ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ಭೋಜನ ಕೂಟ ನಡೆಯಿತು.