ಉಪ್ಪಿನಂಗಡಿ : ಸಂಸ್ಕಾರ ಭಾರತಿ, ಇನ್ನರ್‌ವೀಲ್ ಕ್ಲಬ್ ಹಾಗೂ ರೇಡಿಯೋ ಪಾಂಚಜನ್ಯ ಇವರ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ 9ನೇ ತರಗತಿಯ ಆದ್ಯಾ ಪ್ರಥಮ ಸ್ಥಾನ ಹಾಗೂ 7ನೇ ತರಗತಿಯ ಅನುಪ್ರಿಯಾ ಮತ್ತು ತಂಡದವರು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ. ಇವರಿಗೆ ಸಂಸ್ಥೆಯ ಸಹಶಿಕ್ಷಕಿ ಭಾಗ್ಯಶ್ರೀ ಮಾರ್ಗದರ್ಶನ ನೀಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.