ಪಾಣಾಜೆ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಹಾಗೂ ಪಾಣಾಜೆ ಒಕ್ಕೂಟ ಜ್ಞಾನವಿಕಾಸ ಕೇಂದ್ರ ಮತ್ತು ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜಂಟಿಯಾಗಿ ಆಟಿಡೊಂಜಿ ದಿನ ಕಾರ್ಯಕ್ರಮ ಆ. 13 ರಂದು ಪಾಣಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಸಭಾಂಗಣದಲ್ಲಿ ಜರಗಿತು.
ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಪಾಣಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಸಭಾಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಶಿಕ್ಷಕಿ ಪ್ರತಿಭಾ ಬೊಳ್ಳಿಂಬಳ ರವರು ಮಾಹಿತಿ ನೀಡಿದರು.
ಪಾಣಾಜೆ ಒಕ್ಕೂಟದ ಅಧ್ಯಕ್ಷ ಐತ್ತಪ್ಪ ನಾಯ್ಕ್, ಎಸ್ಕೆಡಿಆರ್ಡಿಪಿ ಯೋಜನಾಧಿಕಾರಿ ಶಶಿಧರ್, ಪಾಣಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಸಿಇಒ ಹರೀಶ್ ಕೆ., ಬೆಟ್ಟಂಪಾಡಿ ಜನಜಾಗೃತಿ ವಲಯ ಮಾಜಿ ಅಧ್ಯಕ್ಷ ಸದಾಶಿವ ರೈ ಸೂರಂಬೈಲು, ಪಾಣಾಜೆ ಪ್ರಾ.ಕೃ.ಪ.ಸಹಕಾರ ಸಂಘದ ನಿರ್ದೇಶಕರಾದ ರವೀಂದ್ರ ಭಂಡಾರಿ, ರವಿಶಂಕರ ಶರ್ಮ, ಗೀತಾ ರೈ, ಗುಣಶ್ರೀ ಪರಾರಿ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ಅನಿತ ಮತ್ತು ಜಯಶ್ರೀ ಪ್ರಾರ್ಥಿಸಿದರು. ರವೀಂದ್ರ ಭಂಡಾರಿ ಸ್ವಾಗತಿಸಿ, ಜ್ಞಾನವಿಕಾಸ ಮೇಲ್ವಿಚಾರಕಿ ಕಾವ್ಯಶ್ರೀ ವಂದಿಸಿದರು. ಪಾಣಾಜೆ ಒಕ್ಕೂಟದ ಕಾರ್ಯದರ್ಶಿ ಅನಿತಾ ವರದಿ ವಾಚಿಸಿದರು.ಬೆಟ್ಟಂಪಾಡಿ ವಲಯ ಮೇಲ್ವಿಚಾರಕ ಸೋಹನ್ ಗೌಡ ಕಾರ್ಯಕ್ರಮ ನಿರೂಪಿಸಿದರು.