ಕೌಕ್ರಾಡಿ: ಪೌಷ್ಟಿಕ ಆಹಾರ ತಯಾರಿ ಪ್ರಾತ್ಯಕ್ಷಿಕೆ, ಮಾಹಿತಿ ಶಿಬಿರ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಇದರ ಕೌಕ್ರಾಡಿ ಧರ್ಮಶ್ರೀ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಪೌಷ್ಠಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಶಿಬಿರ ಆ.13ರಂದು ಕೌಕ್ರಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.


ಕೇಂದ್ರದ ಸದಸ್ಯೆ ಭಾರತಿ ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು ಉದ್ಘಾಟಿಸಿದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ಲೀಲಾ ಅವರು ಮಾಹಿತಿ ನೀಡಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಶುಭ ಹಾರೈಸಿದರು. ಜ್ಞಾನವಿಕಾಸ ತಾಲೂಕು ಸಮನ್ವಯಾಧಿಕಾರಿ ಚೇತನ ಅವರು ಜ್ಞಾನ ವಿಕಾಸ ಕಾರ್ಯಕ್ರಮದ ಸದುದ್ದೇಶ ಬಗ್ಗೆ ತಿಳಿಸಿದರು.


ಜ್ಞಾನವಿಕಾಸ ಕೇಂದ್ರದ ಸದಸ್ಯೆ ಸ್ವರ್ಣಲತಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ವಸಂತಿ ಸ್ವಾಗತಿಸಿದರು. ಸೇವಾಪ್ರತಿನಿಧಿ ನಮಿತಾ ಶೆಟ್ಟಿ ವಂದಿಸಿದರು. ಕೇಂದ್ರದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು, ಸೇವಾ ಪ್ರತಿನಿಧಿಗಳಾದ ಸುಮನ, ಹೇಮಾವತಿ, ಮೋಹಿನಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ:
ಸದಸ್ಯರು ಪೌಷ್ಟಿಕ ಆಹಾರ ತಯಾರಿಕಾ ವಸ್ತುಗಳು ಹಾಗೂ ಔಷಧೀಯ ಸಸ್ಯಗಳನ್ನು ತಂದು ಪರಿಚಯಿಸಿ ಅದರಿಂದ ತಯಾರಿಸಲ್ಪಡುವ ಪದಾರ್ಥಗಳು ಮತ್ತು ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ಕೇಂದ್ರದ ಸದಸ್ಯರು ರಚಿಸಿದ ನವಧಾನ್ಯಗಳ ರಂಗೋಲಿ ಗಮನ ಸೆಳೆಯಿತು. ಜ್ಞಾನವಿಕಾಸ ಕೇಂದ್ರದ ಸದಸ್ಯರು ಮೊಳಕೆ, ಕಾಳುಪಚಡಿ, ನನ್ನೇರಿಯನ್ನು ಪ್ರಾತ್ಯಕ್ಷಿಕೆ ಮೂಲಕ ತಯಾರಿಸಿದರು. ಕೇಂದ್ರದ ಸದಸ್ಯರಿಂದ ಕುಣಿತ ಭಜನೆ ನಡೆಯಿತು.

LEAVE A REPLY

Please enter your comment!
Please enter your name here