ಕೌಕ್ರಾಡಿ ಗ್ರಾ.ಪಂ.ಗೆ ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಎನ್‌ಎಸ್‌ಎಸ್ ಸ್ವಯಂಸೇವಕರ ಭೇಟಿ

0

ನೆಲ್ಯಾಡಿ: ಇಲ್ಲಿನ ಸಂತಜಾರ್ಜ್ ಪ.ಪೂ.ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸ್ವಯಂಸೇವಕರು ಆ.13ರಂದು ಕೌಕ್ರಾಡಿ ಗ್ರಾ.ಪಂ.ಗೆ ಭೇಟಿ ನೀಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಶವಂತ ಬೆಳ್ಚಡ ಅವರಿಂದ ಗ್ರಾಮ ಪಂಚಾಯತ್‌ನ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.


ಯಶವಂತ ಬೆಳ್ಚಡ ಅವರು ಮಾತನಾಡಿ, ವಿದ್ಯಾರ್ಥಿಗಳು ಯಶಸ್ಸಿನ ಗುರಿಯನ್ನು ಮುಟ್ಟಬೇಕಾದರೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿ ಪಂಚಾಯತ್‌ನ ಕೆಲಸ ಕಾರ್ಯಗಳನ್ನು ವಿವರಿಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಭಾರತೀಯ ನೌಕಾಪಡೆಯ ಸೇವೆಯಲ್ಲಿದ್ದ ವೇಳೆ ನಡೆದ ಕಾರ್ಗಿಲ್ ಯುದ್ಧದಲ್ಲಿನ ಅನುಭವವನ್ನು ಯಶವಂತ ಬೆಳ್ಚಡ ಅವರು ಎನ್‌ಎಸ್‌ಎಸ್ ಸ್ವಯಂಸೇವಕರೊಡನೆ ಹಂಚಿಕೊಂಡರು. ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಕಾಲೇಜಿನ ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯಾಕೋಸ್, ಪ್ರಾಂಶುಪಾಲ ಏಲಿಯಾಸ್ ಎಂ.ಕೆ.ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ ಶೆಟ್ಟಿ ಕೆ ಸ್ವಾಗತಿಸಿದರು. ಸಹ ಕಾರ್ಯಕ್ರಮ ಅಧಿಕಾರಿ ಮಧು ಎ.ಜೆ ವಂದಿಸಿದರು. ಎನ್‌ಎಸ್‌ಎಸ್ ಘಟಕ ನಾಯಕರಾದ ದೀಕ್ಷಿತ, ಆಶ್ಲೇಷ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here