ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞೆ ಸ್ವೀಕಾರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಹಿಂದಿ ಉಪನ್ಯಾಸಕ ಲೋಹಿತ್ ಕುಮಾರ್ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ಹಿರಿಯ ಉಪನ್ಯಾಸಕ ವಸಂತಕುಮಾರ್ ಡಿ ಅವರು ಮಾತನಾಡಿ, ಮಾದಕ ವಸ್ತುಗಳು ವಿದ್ಯಾರ್ಥಿಗಳ ಜೀವನವನ್ನು ಹಾಳುಮಾಡುತ್ತದೆ. ವಿದ್ಯಾರ್ಥಿ ಹಂತದಲ್ಲಿಯೇ ತಪ್ಪು ದಾರಿಯನ್ನು ಹಿಡಿದಾಗ, ಉತ್ತಮ ಯುವ ಸಮಾಜವನ್ನು ಖಂಡಿತವಾಗಿಯೂ ನಿರ್ಮಿಸಲು ಸಾಧ್ಯವಿಲ್ಲ. ಯಾವ ಸಮಾಜದಲ್ಲಿ ಯುವ ಸಮೂಹ ತಪ್ಪು ದಾರಿಯಲ್ಲಿ ಇರುತ್ತದೆಯೋ ಆಗ ಇಡೀಯ ರಾಷ್ಟ್ರವೇ ಸಂಕಷ್ಟದಲ್ಲಿ ಸಿಲುಕಿಕೊಳ್ಳುತ್ತದೆ. ವಿದ್ಯಾರ್ಥಿಗಳೆಲ್ಲರೂ ಕೂಡ ಸ್ವಯಂ ಶಿಸ್ತಿನಿಂದ ರಾಷ್ಟ್ರ ಹಿತಕ್ಕಾಗಿ ತಪಸ್ಸಿನ ರೀತಿಯ ಜೀವನವನ್ನು ನಡೆಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಸಿಹಿನೆನಪಿಗಾಗಿ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಎಲ್ಲಾ ವಿದ್ಯಾರ್ಥಿಗಳು ಮಾದಕ ವ್ಯಸನಗಳಿಂದ ದೂರವಿದ್ದು ಉತ್ತಮ ಸಮಾಜ ಕಟ್ಟುವ ಸಂಕಲ್ಪದೊಂದಿಗೆ ಪ್ರತಿಜ್ಞೆಯನ್ನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here