ಉದನೆ: ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ, ಸನ್ಮಾನ

0

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ನೆಲ್ಯಾಡಿ ಹೊರಠಾಣೆ ಹೆಡ್‌ಕಾನ್‌ಸ್ಟೇಬಲ್ ಪ್ರವೀಣ್ ಕೆ. ಎಲ್. ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು ಬ್ಯಾಂಡ್ ವಾದ್ಯಘೋಷ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಉಡುಪು ಧರಿಸಿ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಿರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ತಿಕೇಯನ್ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್ ಅವರು ಸಾವಿರಾರು ದೇಶ ಪ್ರೇಮಿಗಳ ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ. ನಾವು ಈ ದೇಶದಲ್ಲಿ ಇರುವುದಕ್ಕೆ ಹೆಮ್ಮೆ ಪಡಬೇಕು ಎಂದು ಹೇಳಿ ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.


ಮೆಸ್ಕಾಂ ಪುತ್ತೂರು ಶಾಖಾ ಕಿರಿಯ ಅಭಿಯಂತರ ರಮೇಶ್ ಬಿ., ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಅನೇಕರ ತ್ಯಾಗ ಬಲಿದಾನವನ್ನು ನೆನಪಿಸಿಕೊಂಡು, ಇಂದಿನ ಕಾಲಮಾನದಲ್ಲಿ ತ್ಯಾಗಮಾಡಲು ಹಿಂಜರಿಯುತ್ತಾರೆ. ಆದರೆ ಸ್ವಾತಂತ್ರ್ಯಪೂರ್ವದಲ್ಲಿ ಅನೇಕರ ತ್ಯಾಗ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯದ ಉಡುಗೊರೆ ದೊರಕಿದೆ ಎಂದು ಹೇಳಿ, ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿ ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದರು. ನೆಲ್ಯಾಡಿ ಹೊರಠಾಣೆ ಹೆಡ್‌ಕಾನ್‌ಸ್ಟೇಬಲ್ ಪ್ರವೀಣ್ ಕೆ.ಎಲ್. ಅವರು, ಸ್ವಾತಂತ್ರ್ಯದ ಮಹತ್ವ ಹಾಗೂ ನಮ್ಮ ಜವಾಬ್ದಾರಿಗಳನ್ನು ತಿಳಿಸಿದರು. ಮೆಸ್ಕಾಂ ನೆಲ್ಯಾಡಿ ಶಾಖಾ ಕಿರಿಯ ಅಭಿಯಂತರ ರಾಜನ್ ಕೆ.ಆರ್. ಶುಭ ಕೋರಿದರು.

ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಜಯಪ್ರಕಾಶ್, ಬಿ.ಪಿ.ಪಿ.ಎಸ್ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೇಹಿ ಜಾರ್ಜ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥ ಶ್ರೀಧರ ಗೌಡ, ಆಂಗ್ಲಮಾಧ್ಯಮ ವಿಭಾಗದ ಮುಖ್ಯಸ್ಥ ಯಶೋಧರ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸನ್ಮಾನ:
ಮೆಸ್ಕಾಂ ಪುತ್ತೂರು ಶಾಖಾ ಕಿರಿಯ ಅಭಿಯಂತರ ರಮೇಶ್ ಬಿ., ನೆಲ್ಯಾಡಿ ಶಾಖಾ ಪ್ರಭಾರ ಕಿರಿಯ ಅಭಿಯಂತರ ರಾಜನ್ ಕೆ.ಆರ್., ಸಿಬ್ಬಂದಿಗಳಾದ ಶರಣಪ್ಪ, ಅಡಿವೆಪ್ಪ, ರಝಾಕ್, ಸಂಜೀವೆಪ್ಪರವರ ಅವಿರತ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಮಂಗಳೂರಿನ ಉದ್ಯಮಿ ಎ.ಸಿ.ಕುರಿಯನ್ ಹಾಗೂ ಶಿರಾಡಿ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳಿಗೆ ಸಿಹಿ ತಿಂಡಿ ನೀಡಿ ಸಹಕರಿಸಿದರು. ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥ ಯಶೋಧರ ಕೆ ಸ್ವಾಗತಿಸಿ, ಶಿಕ್ಷಕ ಸತ್ಯನಾರಾಯಣ ವಂದಿಸಿದರು. ಶಿಕ್ಷಕಿಯರಾದ ನಯನ, ಕೃತಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕ, ಶಿಕ್ಷಕೇತರ ವೃಂದ, ಪಾಲಕ ವೃಂದ, ಪೂರ್ವವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here