ಮೊಟ್ಟೆತ್ತಡ್ಕ ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮೊಟ್ಟೆತ್ತಡ್ಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಭೂಮಿಕಾ ಒಕ್ಕೂಟ ಮೊಟ್ಟೆತ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಇದರ ವತಿಯಿಂದ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16 ರಂದು ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಜರಗಿತು.

ಅರ್ಚಕರಾದ ಉದಯ ಕಲ್ಲೂರಾಯರವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಮೊಟ್ಟೆತ್ತಡ್ಕ ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮೊಟ್ಟೆತ್ತಡ್ಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಭೂಮಿಕಾ ಒಕ್ಕೂಟ ಮೊಟ್ಟೆತ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here